ಮಡಿಕೇರಿ, ಜ. 10: ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಜಿಲ್ಲೆಗೊಂದರಂತೆ ಇರುವ ವೃದ್ಧಾಶ್ರಮಗಳನ್ನು ರಾಜ್ಯದ ಎಲ್ಲ ಉಪ ವಿಭಾಗಗಳಿಗೆ ಒಂದರಂತೆ ವಿಸ್ತರಿಸಿದ್ದು, ಜಿಲ್ಲೆಯ ಮಡಿಕೇರಿ ಉಪ ವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ, ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಾ. 16 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಗಳನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ ಕೋಟೆ ಆವರಣ, ಮಡಿಕೇರಿ, ಇವರಿಗೆ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸಹಾಯವಾಣಿ ಸಂಖ್ಯೆ 08272-222830ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದೇವರಾಜು ತಿಳಿಸಿದ್ದಾರೆ.