ಸೋಮವಾರಪೇಟೆ, ಜ. 10: ತಾಲೂಕಿನಾದ್ಯಂತ ಜಾನಪದ ಕಲೆ, ಸಂಸ್ಕøತಿ, ಆಚಾರ, ವಿಚಾರಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಜಾನಪದ ಪರಿಷತ್‍ನ ಸದಸ್ಯತ್ವ ಅಭಿಯಾನಕ್ಕೆ ಇಲ್ಲಿನ ಪತ್ರಿಕಾಭವನದಲ್ಲಿ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಜಾನಪದ ಕಲೆ, ಸಾಹಿತ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪರಿಷತ್ ಕಾರ್ಯೋನ್ಮುಖ ವಾಗಿರುವದು ಶ್ಲಾಘನೀಯ ಎಂದರು.
ಹಲವಷ್ಟು ಕಲೆಗಳು ಜನಮಾನಸದಿಂದ ಕಣ್ಮರೆಯಾಗುತ್ತಿದ್ದು, ಇವುಗಳನ್ನು ಉಳಿಸಿ ಮುಂದಿನ ಜನಾಂಗಕ್ಕೂ ಪರಿಚಯಿಸಬೇಕಿದೆ ಎಂದು ಅಭಿಪ್ರಾಯಿಸಿದರು.
ಈ ಸಂದರ್ಭ ಪರಿಷತ್‍ನ ತಾಲೂಕು ಅಧ್ಯಕ್ಷ ಚಂದ್ರಮೋಹನ್, ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್, ಕಾರ್ಯದರ್ಶಿ ರುಬೀನಾ, ಉಪಾಧ್ಯಕ್ಷ ನ.ಲ. ವಿಜಯ, ಶನಿವಾರಸಂತೆ ಹೋಬಳಿ ಘಟಕದ ಕಾರ್ಯದರ್ಶಿ ಮಾಲಂಬಿ ದಿನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.