ಮಡಿಕೇರಿ, ಜ. 10: ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಶೋಕಪುರ ಸಂತೋಷ ಯುವಕ ಸಂಘ ಇವರ ವತಿಯಿಂದ ತಾ. 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಯುವ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಯುವದಿನ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪಿ.ಆರ್.ವಿಜಯ್, ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆ.ಪಿ. ಗುರುರಾಜ್ ಇತರರು ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರೀಯ ಸೇವಾ ಕಾರ್ಯಕರ್ತರ ನೇಮಕಾತಿಯ ನೆಹರು ಯುವ ಕೇಂದ್ರ ನವದೆಹಲಿಯ ಮಹಾ ನಿರ್ದೇಶಕರ ಪ್ರತಿನಿಧಿ ಧನಂಜಯ ಅಗೋಳಿಕಜೆ ಅವರು ವಿವೇಕಾನಂದರ ಆದರ್ಶ ತತ್ವಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.