ಕುಶಾಲನಗರ, ಜ. 10: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.
ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್, ರೆಡ್‍ಕ್ರಾಸ್ ಮತ್ತು ಎನ್ನೆಸ್ಸೆಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ರಕ್ತದಾನದ ಮಹತ್ವ ಮತ್ತು ಕುಟುಂಬ ಕಲ್ಯಾಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ.ಕರುಂಬಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಚೇತನ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್, ಕಾಲೇಜು ಪ್ರಾಂಶುಪಾಲ ಹೆಚ್.ಬಿ. ಲಿಂಗಮೂರ್ತಿ, ರೆಡ್ ಕ್ರಾಸ್ ಘಟಕದ ಸಂಚಾಲಕ ರಾಮಚಂದ್ರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ, ಹಿರಿಯ ಆರೋಗ್ಯ ಸಹಾಯಕಿ ಹೆಚ್.ಎನ್.ದಮಯಂತಿ, ರಕ್ತನಿಧಿ ಘಟಕದ ಸಹಾಯಕರಾದ ರಿಚಿ ಪವನ್, ಕಮಲ, ಸವಿತ, ಚಿತ್ರಲೇಖ, ಮೋನಿಕ, ರಾಘವೇಂದ್ರ ಇದ್ದರು.