ಕೂಡಿಗೆ, ಜ. 11: ಹಾರಂಗಿ ಅಣೆಕಟ್ಟೆಯಲ್ಲಿ ನೀರು ಸಂಗ್ರಹಿಸಿ, ರೈತರಿಗೆ ಬೇಸಿಗೆಯಲ್ಲಿ ಬೆಳೆ ಬೆಳೆಯಲು ನೀರನ್ನು ಒದಗಿಸಿಕೊಡಿ ಎಂದು ಇಲ್ಲಿನ ರೈತರು ಆಗ್ರಹಿಸಿದ್ದಾರೆ.
ಜಿಲ್ಲೆಯ ಪ್ರಮುಖ ಅಣೆಕಟ್ಟೆ ಯಾದ ಹಾರಂಗಿ ಅಣೆಕಟ್ಟೆಯಲ್ಲಿ ಕಳೆದ ಸಾಲಿಗಿಂತಲೂ ಈ ಭಾರಿ ಹೆಚ್ಚು ನೀರು ಸಂಗ್ರಹವಾಗಿದೆ. ಈ ನೀರನ್ನು ಈಗಾಗಲೇ ಮಳೆಗಾಲದ ಬೆಳೆಗೆ ಬಿಟ್ಟು ಸ್ಥಗಿತಗೊಳಿಸಲಾಗಿದೆ. ಮುಂದಿನ ಮಾರ್ಚ್ ತಿಂಗಳಿನಲ್ಲಿ ಹಾರಂಗಿಯಿಂದ ಕೊಡಗಿನ ಗಡಿಭಾಗ ಶಿರಂಗಾಲದವರೆಗೆ ರೈತರು ಎರಡನೇ ಬೆಳೆ ಬೆಳೆಯಲು ಸನ್ನದ್ಧರಾಗುತ್ತಿದ್ದಾರೆ. ಆದ್ದರಿಂದ ಈ ಸಾಲಿನಲ್ಲಿ ಬೇಸಿಗೆ ಬೆಳೆಗೆ, ಹಾರಂಗಿಯಿಂದ ಎಡದಂಡೆ ನಾಲೆಯ ಮೂಲಕ ನೀರನ್ನು ಹರಿಸಿ ವ್ಯವಸಾಯ ಮಾಡಲು ಈ ಭಾಗದ ನೀರು ಬಳಕೆದಾರರ ಸಂಘ ಹಾಗೂ ಸ್ಥಗಿತಗೊಳಿಸಲಾಗಿದೆ. ಮುಂದಿನ ಮಾರ್ಚ್ ತಿಂಗಳಿನಲ್ಲಿ ಹಾರಂಗಿಯಿಂದ ಕೊಡಗಿನ ಗಡಿಭಾಗ ಶಿರಂಗಾಲದವರೆಗೆ ರೈತರು ಎರಡನೇ ಬೆಳೆ ಬೆಳೆಯಲು ಸನ್ನದ್ಧರಾಗುತ್ತಿದ್ದಾರೆ.