ಕೂಡಿಗೆ, ಜ. 11: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವು ತಾ. 14 ರಂದು ನಡೆಯಲಿದೆ. ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಾಚರಣಿಯಂಡ ಪಿ. ಅಪ್ಪಣ್ಣ ಅವರು ಉದ್ಘಾಟಿಸಲಿದ್ದಾರೆ. ಪ್ರಧಾನ ಭಾಷಣಕಾರರಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಆಗಮಿಸಲಿದ್ದು, ಬಹುಮಾನ ವಿತರಣೆಯನ್ನು ಕೊಡಗು ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಅವರು ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ ಅಧ್ಯಕ್ಷೆ ಪುಷ್ಪಾ ರಾಜೇಶ್, ಜಿ.ಪಂ ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ ಸದಸ್ಯ ಡಿ.ಎಸ್. ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ಸೈನಿಕ ಶಾಲೆಯ ಪ್ರಾಂಶುಪಾಲ ರಾಜೀವ್ ರಂಜನ್‍ಲಾಲ್, ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಆರ್, ಡಯಟ್‍ನ ಪ್ರಾಂಶುಪಾಲರಾದ ವಾಲ್ಟರ್ ಹಿಲರಿ ಡಿಮೆಲ್ಲೊ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಹಾಗೂ ವಿಶೇಷ ಆಹ್ವಾನಿತರಾಗಿ ಕೂಡಿಗೆಯ ಡಯಟ್‍ನ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವಿಚಂದ್ರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.