ನಾಪೆÇೀಕ್ಲು, ಜ. 11: ರಾಜ್ಯ ಸರಕಾರ ರೈತರ ಒಂದು ಲಕ್ಷದವರೆಗಿನ ಸಾಲ ಮನ್ನಾ ಮಾಡುವದಾಗಿ ಘೋಷಿಸಿದ್ದು, ಈಗ ಮೀನಾ -ಮೇಷ ಎಣಿಸುತ್ತಿದೆ. ಕೂಡಲೇ ಸಾಲ ಮನ್ನಾಕ್ಕೆ ಕ್ರಮಕೈಗೊಳ್ಳಬೇಕೆಂದು ನಾಪೆÇೀಕ್ಲು ಹೋಬಳಿ ಬಿಜೆಪಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಎಚ್ಚರಿಸಿದ್ದಾರೆ.

ನಾಪೆÇೀಕ್ಲು ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಪೆÇೀಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 570 ರೈತರು ಸಾಲ ಪಡೆದಿದ್ದು, ಇವರಲ್ಲಿ ಮಾಹಿತಿ ತಂತ್ರಜ್ಞಾನದ ಪ್ರಕಾರ 300 ರೈತರ ಅರ್ಜಿ ಮಾತ್ರ ಸ್ವೀಕೃತಗೊಂಡಿದೆ. ಇನ್ನುಳಿದ 270 ಜನ ರೈತರ ಅರ್ಜಿಯನ್ನು ಪಡಿತರ ಚೀಟಿ, ಆರ್.ಟಿ.ಸಿ ಮತ್ತಿತರ ದಾಖಲೆಗಳು ಸರಿ ಹೊಂದದ ಹೆಸರಿನಲ್ಲಿ ತಿರಸ್ಕರಿಸಲಾಗಿದೆ. ಆದುದರಿಂದ ಕೂಡಲೇ ಜಿಲ್ಲಾ ಸಹಕಾರಿ ಯೂನಿಯನ್ ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿ ಎಲ್ಲಾ ಸಾಲಗಾರರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದ ಅಂಬಿ ಕಾರ್ಯಪ್ಪ, ಕೊಡಗಿನಲ್ಲಿ ನಡೆದ ಪ್ರಕೃತಿ ವಿಕೋಪ, ಅನಾವೃಷ್ಟಿ, ಬರಗಾಲದ ನಷ್ಟಗಳನ್ನು ಮಾಹಿತಿ ತಂತ್ರಜ್ಞಾನಕ್ಕೆ ಒಳಪಡಿಸದೆ ರೈತರಿಗೆ ನೇರವಾಗಿ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರಕಾರ ರೈತರ ಸಾಲ ಮನ್ನಾ ಮಾಡುವ ನೆಪದಲ್ಲಿ ಪೆಟ್ರೋಲ್, ಡೀಸೆಲ್, ವಾಹನ ತೆರಿಗೆ ಸೇರಿದಂತೆ ಎಲ್ಲಾ ರೀತಿಯಲ್ಲೂ ರೈತರಿಗೆ ತೊಂದರೆ ನೀಡುತ್ತಿದೆ ಎಂದು ಆರೋಪಿಸಿದ ಅವರು ಕೂಡಲೇ ಈ ಬಗ್ಗೆ ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಅದರೊಂದಿಗೆ ರಾಷ್ಟ್ರೀಕೃತ ಬ್ಯಾಂಕ್‍ನ ಸಾಲ ಮನ್ನಾದ ಬಗ್ಗೆ ನಿಖರವಾದ ಮಾಹಿತಿಯನ್ನು ರೈತರಿಗೆ ನೀಡಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಸ್ಥಳೀಯ ರೈತರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಬಿದ್ದಾಟಂಡ ಜಿನ್ನು ನಾಣಯ್ಯ, ಎನ್.ಎಸ್. ಉದಯಶಂಕರ್, ಶಿವಚಾಳಿಯಂಡ ಜಗದೀಶ್, ಪಾಡಿಯಮ್ಮಂಡ ಮನು ಮಹೇಶ್, ಕಂಗಾಂಡ ಜಾಲಿ ಪೂವಪ್ಪ ಇದ್ದರು.