ಕುಶಾಲನಗರ, ಜ. 12: ಕುಶಾಲನಗರ ಸಮೀಪದ ಬ್ಯಾಡಗೊಟ್ಟ ನಿರಾಶ್ರಿತ ಶಿಬಿರದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೂಲತಃ ಚಿತ್ರದುರ್ಗದ ಮೇದಹಳ್ಳಿಯ ನಿವಾಸಿ ಎಲ್ಲಪ್ಪ (40) ಎಂಬಾತ ಶಿಬಿರದಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಹೃದಯಾಘಾತ ಸಂಭವಿಸಿದೆ. ತಕ್ಷಣ ಕುಶಾಲನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.