ಸೋಮವಾರಪೇಟೆ, ಜ. 12: ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಒಳಪಡುವ 8 ಆರೋಗ್ಯ ಉಪ ಕೇಂದ್ರಗಳಿಗೆ ಸಂಬಂಧಿಸಿದಂತೆ ಕೇವಲ 2 ಮಂದಿ ಮಹಿಳಾ ಆರೋಗ್ಯ ಸಹಾಯಕಿಯರಿದ್ದು, ಉಳಿದ 6 ಕೇಂದ್ರಗಳಿಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಗುಡ್ಡಗಾಡು ಪ್ರದೇಶವಾಗಿರುವ ಈ ವ್ಯಾಪ್ತಿಯಲ್ಲಿ ಕೇವಲ ಈರ್ವರು ಆರೋಗ್ಯ ಸಹಾಯಕಿಯರಿದ್ದು, ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆ ಉಳಿದ 6 ಉಪಕೇಂದ್ರಗಳಿಗೆ ಆರೋಗ್ಯ ಸಹಾಯಕಿಯರನ್ನು ನೇಮಿಸಲು ಕ್ರಮವಹಿಸಬೇಕೆಂದು ರಾಜಪ್ಪ, ಗೋಪಾಲ್, ಉತ್ತಯ್ಯ, ಕಾಳಪ್ಪ ಸೇರಿದಂತೆ ಇತರರು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.