ಮಡಿಕೇರಿ, ಜ. 12: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯಿಂದ ನಡೆಯುತ್ತಿರುವ ‘ಕೊಡಗು ಪ್ರವಾಸಿ ಉತ್ಸವ’ ಮೂರನೇ ಹಾಗೂ ಕೊನೆ ದಿನವಾದ ತಾ. 13 ರಂದು (ಇಂದು) ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ನಗರದ ರಾಜಾಸೀಟು ರಸ್ತೆ ಮಾರ್ಗ ಓಪನ್ ಸ್ಟ್ರೀಟ್ ಫೆಸ್ಟಿವಲ್ ಜರುಗಲಿದೆ.

ಸಂಜೆ 5.30 ರಿಂದ 6.30 ರವರೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ, ಸಂಜೆ 6.30 ರಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ಸಂಗೀತ ರಸ ಸಂಜೆ (ವ್ಯಾಸರಾಜ್, ಅನುರಾಧ ಭಟ್, ಇಂದು ನಾಗರಾಜ್, ಲಕ್ಷ್ಮೀ ನಾಗರಾಜ್, ಸಂಜಿತ್ ಹೆಗ್ಡೆ, ಶ್ರೀನಿವಾಸ್), ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿವೆ.