ಮಡಿಕೇರಿ, ಜ. 12: ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ವತಿಯಿಂದ ಬ್ಯಾರಿ ಸಮಾವೇಶದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟಕ್ಕೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಇಂದು ಚಾಲನೆ ದೊರೆಯಿತು.ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಪಂದ್ಯಾಟಕ್ಕೆ ಚಾಲನೆ ನೀಡಿದರು. ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಬಿ.ಎ. ಷಂಶುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮುನೀರ್ ಅಹ್ಮದ್ ಆಶಯ ನುಡಿಗಳನ್ನಾಡಿದರು. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎಸ್.ಎಂ. ಶರೀಫ್ ಉಪಸ್ಥಿತರಿದ್ದರು.ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್‍ನ ಎ ಮತ್ತು ಬಿ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು. ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಎ ತಂಡ ಜಯಗಳಿಸಿತು.ಪಂದ್ಯಾಟದಲ್ಲಿ 15 ತಂಡಗಳು ಭಾಗವಹಿಸಿದ್ದು, ಪ್ರತಿ ತಂಡದಲ್ಲಿ 9 ಮಂದಿ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗಿದೆ.

(ಮೊದಲ ಪುಟದಿಂದ) ವಿಜೇತ ತಂಡಕ್ಕೆ 15 ಸಾವಿರ ರೂ. ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ 10 ಸಾವಿರ ನಗದು ಟ್ರೋಫಿ ನೀಡಲಾಗುತ್ತದೆ. ತಾ. 13 ರಂದು (ಇಂದು) ಕೂಡ ಪಂದ್ಯಾಟ ನಡೆಯಲಿದೆ.