ನಾಪೆÇೀಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗಮಂಡಲ ವಲಯದ ವತಿಯಿಂದ “ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ” ಕಾರ್ಯಕ್ರಮದಡಿಯಲ್ಲಿ ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳ, ಕಕ್ಕುಂದಕಾಡು ಶ್ರೀ ವೆಂಕಟರಮಣ ದೇವಳ, ನಾಪೆÇೀಕ್ಲು ಶ್ರೀ ಭಗವತಿ ದೇವಳ, ಮೂಟೇರಿ ಶ್ರೀ ಉಮಾಮಹೇಶ್ವರಿ ದೇವಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸೇವಾ ಪ್ರತಿನಿಧಿಗಳು ಇದ್ದರು.ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡಮಳ್ತೆ ಎ. ಕಾರ್ಯಕ್ಷೇತ್ರದ ವತಿಯಿಂದ ಹೊನ್ನವಳ್ಳಿ ಗ್ರಾಮದ ಹುಲಿ ಬಸವೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿ ಕಾರ್ಯಕ್ಷೇತ್ರ ವ್ಯಾಪ್ತಿಯ ಸ್ವಸಹಾಯ ಹಾಗೂ ಪ್ರಗತಿ ಬಂಧು ಸಂಘಗಳ ಸದಸ್ಯರುಗಳು ದೇವಾಲಯ ಆವರಣವನ್ನು ಶ್ರಮದಾನದ ಮೂಲಕ ಶುಚಿಗೊಳಿಸಿದರು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಚಿದು, ದೊಡ್ಡಮಳ್ತೆ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಒಕ್ಕೂಟದ ಅಧ್ಯಕ್ಷ ವಿನೋದ್‍ಕುಮಾರ್, ಸೇವಾ ಪ್ರತಿನಿಧಿ ಚೈತ್ರ, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಯಡವನಾಡು ಒಕ್ಕೂಟದ ವತಿಯಿಂದ ಹುದುಗೂರು ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ ಸಂಕ್ರಾಂತಿ ಹಬ್ಬಕ್ಕೆ ತಯಾರಿ ನಡೆಸಲಾಯಿತು.

ಶ್ರದ್ಧಾಕೇಂದ್ರಗಳ ಸ್ವಚ್ಛತೆ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಶಾಂತಿಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಒಕ್ಕೂಟದ ಉಪಾಧ್ಯಕ್ಷೆ ಮೀನಾ, ಯಡವನಾಡು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸುಧಾನೀತಿಕುಮಾರ್ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ದೇವಸ್ಥಾನದ ಅರ್ಚಕರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದು, ದೇವಸ್ಥಾನ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಕೂಡಿಗೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ಸಂಘಟಿಸಿದರು.