ಮಡಿಕೇರಿ, ಜ. 13: ಕಾಫಿ ಬೆಳೆಯುವ ಮೂರು ಜಿಲ್ಲೆಗಳಿಂದ 1,50,000 ರೈತ ಬೆಳೆಗಾರರನ್ನು ಪ್ರತಿನಿಧಿಸುತ್ತಿರುವ ರಾಜ್ಯ ಮಟ್ಟದ ಸಂಘಟನೆಯಾದ ಕರ್ನಾಟಕ ಬೆಳೆಗಾರರ ಒಕ್ಕೂಟವು ತಾ. 15ರಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳೆಗಾರರ ಮಹಾ ಸಮ್ಮೇಳನ ಮತ್ತು ಕಾಫಿ ಕೃಷಿ ಮೇಳವನ್ನು ಹಮ್ಮಿಕೊಂಡಿದೆ. ಈ ಸಮ್ಮೇಳನದಲ್ಲಿ ಕೇಂದ್ರ ವಾಣಿಜ್ಯ ಸಚಿವ ಸುರೇಶ್ಪ್ರಭು ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಸಚಿವರುಗಳು, ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿರುವರು. ಹಾಗೂ ಕಾಫಿ ಬೆಳೆಯುವ ಮೂರು ಜಿಲ್ಲೆಯಿಂದ ಸುಮಾರು ಬೆಳೆಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿವಿಧ ಸಂಘಟನೆಗಳು, ಸಾರ್ವಜನಿಕರು, ಕಾರ್ಮಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಬೆಳೆಗಾರರ ಒಕ್ಕೂಟವು ಕೋರಿದೆ.