ಮಡಿಕೇರಿ, ಜ. 13: ಪ್ರಸಕ್ತ (2018-19) ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರ್ತಿಸಲ್ಪಟ್ಟ ದೇವದಾಸಿಯರ ಗಂಡು ಮಕ್ಕಳು ಇತರ ಜಾತಿ ಹುಡುಗಿಯನ್ನು ವಿವಾಹವಾದಲ್ಲಿ ರೂ. 3 ಲಕ್ಷ ಹಾಗೂ ದೇವದಾಸಿಯರ ಹೆಣ್ಣು ಮಕ್ಕಳು ಇತರ ಜಾತಿಯ ಹುಡುಗನನ್ನು ವಿವಾಹವಾದ ಪ್ರಕರಣಗಳಲ್ಲಿ ರೂ. 5 ಲಕ್ಷಗಳ ಪ್ರೋತ್ಸಾಹ ಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪತಿ ಅಥವಾ ಪತ್ನಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಸಕ್ಷಮ ಪ್ರಾಧಿಕಾರಗಳಿಂದ ಜಾತಿ ಪ್ರಮಾಣ ಪತ್ರ ಪಡೆದಿರಬೇಕು. ದಂಪತಿಗಳು ಕರ್ನಾಟಕ ರಾಜ್ಯದ ಖಾಯಂ ವಾಸಿಯಾಗಿರಬೇಕು. ಆದರೆ ಇತರ ರಾಜ್ಯದ ಪುರುಷ/ ಮಹಿಳೆಯನ್ನು ಮದುವೆಯಾದಲ್ಲಿ ಪತಿ-ಪತ್ನಿ ಇಬ್ಬರಲ್ಲಿ ಒಬ್ಬರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗೆ ಸೇರಿರಬೇಕು ಮತ್ತು ಖಾಯಂ ವಾಸಿಯಾಗಿರಬೇಕು. ಗುರುತಿಸಲ್ಪಟ್ಟ ದೇವದಾಸಿಯವರ ಮಕ್ಕಳನ್ನು ಗುರುತಿಸಲ್ಪಟ್ಟ ಇನ್ನೊಬ್ಬ

ದೇವದಾಸಿಯವರ ಮಕ್ಕಳು ಮದುವೆ ಮಾಡಿಕೊಂಡರೆ ಪ್ರೋತ್ಸಾಹ ಧನ ಪಡೆಯಲು ಅರ್ಹರಿರುವದಿಲ್ಲ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ, 08272-225531. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ, 08276-281115. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.