ಕೂಡಿಗೆ, ಜ. 13: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದ ಸಮೀಪದ ರಾಂಪುರ- ಕಣಿವೆ ಗ್ರಾಮಕ್ಕೆ ಸಂಪರ್ಕ ಕಾಂಕ್ರಿಟ್ ರಸ್ತೆಗೆ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟೇಶ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದೆ. ಇದನ್ನು ಗ್ರಾಮದ ಜನರು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಉದ್ಯೋಗ ಚೀಟಿಯ ಮೂಲಕ ನೋಂದಣಿ ಮಾಡಿಕೊಳ್ಳುವದರ ಮೂಲಕ ಗ್ರಾಮದ ಕಾಮಗಾರಿಗಳನ್ನು ನಡೆಸಲು ಅನುಕೂಲವಾಗುವದು ಎಂದರು. ಈ ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಂದೂವರೆ ಲಕ್ಷ ರೂ. ವೆÀಚ್ಚದಲ್ಲಿ ನಡೆಸಲು ಕಾಮಗಾರಿಗೆ ಚಾಲನೆ ನೀಡಲಾಗಿದೆ. ರಾಂಪುರದ ಪ್ರಕಾಶನವರ ಮನೆಯಿಂದ. ಸ್ವಾಮಿನವರ ಮನೆಯವರಗೆ ರಸ್ತೆ ಕಾಮಗಾರಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.