ಮಡಿಕೇರಿ, ಜ. 13: ಇಲ್ಲಿನ ಭಗವತಿ ನಗರದಲ್ಲಿ ನಿನ್ನೆ ತಡರಾತ್ರಿ ಹಳೆಯ ದ್ವೇಷದಿಂದ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಬಗ್ಗೆ ನಗರ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಅಲ್ಲಿನ ನಿವಾಸಿಗಳಾದ ಕಾಶಿಕಾವೇರಪ್ಪ ಹಾಗೂ ಚಂದನ್ ತೀವ್ರ ಗಾಯಗೊಂಡು, ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಆರೋಪಿಗಳಾದ ಅಚ್ಚಯ್ಯ, ಅಯ್ಯಪ್ಪ, ನಿಖಿಲ್ ಎಂಬವರ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.