ಸಿದ್ದಾಪುರ, ಜ. 16: ಅಮ್ಮತ್ತಿಯ ಮಿಲನ್ಸ್ ಬಾಯ್ಸ್ ಯುವಕ ಸಂಘದ ವತಿಯಿಂದ ತಾ. 19 ರಂದು ಅಮ್ಮತ್ತಿಯಲ್ಲಿ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾಟ ನಡೆಯಲಿದೆ.

ಅಮ್ಮತ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಿಲನ್ಸ್ ಕಪ್ 2019 ಪಂದ್ಯಾಟವನ್ನು ಬೆಳಿಗ್ಗೆ 9.30ಕ್ಕೆ ಕೆ.ಡಿ.ಎಫ್.ಎ. ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಲನ್ಸ್ ಬಾಯ್ಸ್ ಯುವಕ ಸಂಘದ ಅಧ್ಯಕ್ಷ ವಿ.ಎಸ್. ಚಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಶೋಭಾ ಶ್ರೀನಿವಾಸ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.