ಮಡಿಕೇರಿ, ಜ. 14: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಸಹಯೋಗದಲ್ಲಿ ತಾ. 15 ರಂದು (ಇಂದು) ಬೆಳಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾವೇರಿ ಹಾಲ್‍ನ ಹಬೀಬ್ ಲಾಯರ್ ವೇದಿಕೆಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಮಾವೇಶ ನಡೆಯಲಿದೆ.

ಸಾಹಿತಿ ಬಿ.ಎ.ಷಂಶುದ್ದೀನ್, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಬಿ.ಎಂ. ಫಾರೂಕ್, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎ. ಹಸನಬ್ಬ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷÀ ಎ.ಸಿ. ಭಂಡಾರಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷÀ ಪೆಮ್ಮಂಡ ಕೆ. ಪೊನ್ನಪ್ಪ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ. ನಾಯ್ಕ ಇತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.