ವೀರಾಜಪೇಟೆ, ಜ. 16: ಕಾಂಗ್ರೆಸ್ ಪಕ್ಷದ ವೀರಾಜಪೇಟೆ ತಾಲೂಕು ಸಮಿತಿಯಿಂದ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ವಿರೋಧಿಸಿ ತಾಲೂಕು ಕಚೇರಿ ಮುಂದೆ ತಾ. 17ರಂದು (ಇಂದು) ಬೆಳಿಗ್ಗೆ 11-30ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸದಸ್ಯರು, ಪಕ್ಷದ ಜಿಲ್ಲಾ ಹಾಗೂ ತಾಲೂಕು ಮುಖಂಡರುಗಳು ಭಾಗವಹಿಸಲಿರು ವದಾಗಿ ಸಲಾಂ ತಿಳಿಸಿದ್ದಾರೆ.