ಮಡಿಕೇರಿ, ಜ. 14: ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ತಾ. 15 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4 ಗಂಟೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ಕೊಡಗು ಜಿಲ್ಲಾ ಬ್ಯಾರಿ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ ಕರ್ಜಗಿ ತಿಳಿಸಿದ್ದಾರೆ.