ಸೋಮವಾರಪೇಟೆ, ಜ. 16: ಇಲ್ಲಿನ ಯಂಗ್ ಇಂಡಿಯನ್ ಫಾರ್ಮರ್ ಅಸೋಸಿಯೇಷನ್ (ವೈಐಎಫ್ಎ) ವತಿಯಿಂದ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ ಬಳಿಯಲ್ಲಿರುವ ಬಸ್ ತಂಗುದಾಣಕ್ಕೆ ಸುಣ್ಣ ಬಣ್ಣ ಬಳಿಯುವ ಮೂಲಕ ಕಾಯಕಲ್ಪ ನೀಡಲಾಯಿತು.
ಕಳೆದ ಅನೇಕ ವರ್ಷಗಳಿಂದ ನಿರ್ವಹಣೆಯಿಲ್ಲದೇ ಸುಣ್ಣಬಣ್ಣ ಕಾಣದೇ ಗೋಡೆಗಳು ಶಿಥಿಲಾವಸ್ಥೆಗೆ ತಲಪಿದ್ದವು. ಇದನ್ನು ಮನಗಂಡ ಸಂಘಟನೆಯ ಪದಾಧಿಕಾರಿಗಳು ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದರು. ವೈಐಎಫ್ಎ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಕಾಯಕಲ್ಪ ನೀಡಿದರು.