ಕೂಡಿಗೆ, ಜ. 14 : ವಿದ್ಯಾರ್ಥಿಗಳು ಸ್ವಂತಿಕೆ ಮತ್ತು ಆತ್ಮವಿಶ್ವಾಸ ಬೆಳೆಸಿಕೊಂಡು, ಶ್ರಮಜೀವಿಗಳಾಗಿ, ಕ್ರಿಯಾಶೀಲರಾಗಿ ಜೀವನ ನಡೆಸುವ ಮೂಲಕ ದೇಶದ ಉತ್ತಮ ಭವಿಷ್ಯದ ಬಗ್ಗೆ ಚಿಂತನೆ ಹರಿಸಬೇಕಿದೆ. ತಮ್ಮ ಸ್ಪಷ್ಟ ಗುರಿಯೊಂದಿಗೆ ಸಾಗಿದರೆ ಯಶಸ್ಸÀು ಸಾಧಿಸಬಹುದು. ಹದಗೆಟ್ಟಿರುವ ಸಾಮಾಜಿಕ ವ್ಯವಸ್ಥೆಗಳನ್ನು ಸರಿಪಡಿಸಲು ಅಧಿಕಾರ ಎಂಬ ಶಕ್ತಿ ಪಡೆದುಕೊಳ್ಳಲು ಜನ ನಾಯಕರಾಗಬೇಕಿದೆ ಎಂದು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ವಿದ್ಯಾರ್ಥಿಗಳು ಸಲಹೆ ನೀಡಿದರು.

ಕೂಡಿಗೆಯ ಶ್ರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಅವರು, ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂದು ಸಾಹಿತಿ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಾಚರಣಿಯಂಡ ಪಿ ಅಪ್ಪಣ್ಣ ಅವರು ಮಾತನಾಡಿ, ವಿದ್ಯಾರ್ಥಿಗಳು ಮೇಲು, ಕೀಳು, ಜಾತಿ, ಧರ್ಮಗಳ ಎಲ್ಲೆ ಮೀರಿ ಸದ್ಗುಣಗಳನ್ನು ಮೈಗೂಡಿಕೊಂಡು ಉತ್ತಮ ಸಮಾಜ ನಿರ್ಮಾಣದತ್ತ ಮುಂದಾಗಬೇಕಿದೆ. ಪ್ರಾಚೀನ ಕಾಲದ ಋಷಿ ಮುನಿಗಳ ಶಿಕ್ಷಣ ಕ್ರಮ ಮರುಕಳಿಸುವ ಸಲುವಾಗಿ ಪ್ರಧಾನಿಗಳಾಗಿದ್ದ ಮೊರಾರ್ಜಿ ದೇಸಾಯಿ ಚಿಂತನೆ ಹರಿಸಿದ್ದರು. ಸರಿಸಮಾನ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಆರಂಭವಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ವಿದ್ಯಾರ್ಥಿಗಳಿಗೆ ಪರಿಪೂರ್ಣವಾದ ಶಿಕ್ಷಣ ಒದಗಿಸುವಲ್ಲಿ ಪೂರಕ ವ್ಯವಸ್ಥೆಗಳನ್ನು ಒಳಗೊಂಡಿರುವದು ಕಾಣಬಹುದು ಎಂದರು.

ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡ ಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಪಂ ಅಧ್ಯಕ್ಷೆ ಪುಷ್ಪಾ ರಾಜೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯೆ ಕೆ.ಆರ್.ಮಂಜುಳಾ, ತಾಪಂ ಸದಸ್ಯ ಡಿ.ಎಸ್.ಗಣೇಶ್, ಕ್ಷೆತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ, ಡಯಟ್‍ನ ಹಿರಿಯ ಉಪನ್ಯಾಸಕ ಕೆ.ವಿ.ಸುರೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್, ಉದ್ಯಮಿ ಥಾಮಸ್, ಶಾಲಾ ಪ್ರಾಂಶುಪಾಲ ಪ್ರಕಾಶ್, ಪೆÇೀಷಕ ಸಮಿತಿ ಸದಸ್ಯರಾದ ಗಂಗಾಧರ, ರವಿ, ಹರೀಶ್, ಪ್ರಮುಖರಾದ ಶೇಖರ್, ಲೋಕೇಶ್ ಮತ್ತಿತರರು ಇದ್ದರು. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡ ಲಾಯಿತು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯ ಕ್ರಮಗಳು ಜರುಗಿದವು.