ಮಡಿಕೇರಿ, ಜ. 14: ಶ್ರೀತಲಕಾವೇರಿ ದೇವಾಲಯದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಗಳ ಕುರಿತು ತಾ. 16 ರಂದು (ಇಂದು) ಶ್ರೀ ತಲಕಾವೇರಿ ದೇವಾಲಯದಲ್ಲಿ ಏರ್ಪಡಿಸಲಾಗಿದ್ದ ವಿಮರ್ಶೆ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.