ಶನಿವಾರಸಂತೆ, ಜ. 16: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಹೆಮ್ಮನೆ ಗ್ರಾಮದಲ್ಲಿ ಮದ್ಯಪಾನ ಮಾಡಿದ ಪತಿ ತನ್ನ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವದಾಗಿ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತಿ ಕಾರ್ತಿಕ್ ವಿರುದ್ಧ ದೂರು ನೀಡಿರುವ ವೀಣಾ ತನ್ನ ತಾಯಿಯೊಂದಿಗೆ ಹೊಂದಿಕೊಂಡು ಹೋಗುವದಾದರೇ ಇರು ಇಲ್ಲದಿದ್ದರೆ ಮನೆ ಬಿಟ್ಟು ಹೋಗು ಎಂದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಅತ್ತೆ ರಾಧಾ ಹಾಗೂ ಮೈದುನ ಕೌಶಿಕ್ ಕುಮ್ಮಕ್ಕಿನಿಂದ ಪತಿ ತನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.