ಮಡಿಕೇರಿ, ಜ.16 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸಹಕಾರ ಧವಸ ಭಂಡಾರಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ಸಂಘಗಳ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮವು ತಾ. 18 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.

ವಿರಾಜಪೇಟೆ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿ ಪುರಸ್ಕøತರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕ ಕೆ.ಎಂ.ಸೋಮಯ್ಯ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.