ಮಡಿಕೇರಿ, ಜ.16 : ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ-1 ಮತ್ತು ಸ್ವ ಆರ್ಥಿಕ ಘಟಕ ವತಿಯಿಂದ ತಾ. 17 ರಿಂದ 23 ರವರೆಗೆ ವೀರಾಜಪೇಟೆ ತಾಲೂಕು ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.
ತಾ. 17 ರಂದು ಮಧ್ಯಾಹ್ನ 2.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಡಿಕೇರಿ ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಉದ್ಘಾಟಿಸಲಿದ್ದಾರೆ. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ತಾ. 23 ರಂದು ಬೆಳಗ್ಗೆ 11 ಗಂಟೆಗೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ, ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಎಚ್.ಆರ್. ಇತರರು ಭಾಗವಹಿಸಲಿದ್ದಾರೆ.