ಸೋಮವಾರಪೇಟೆ, ಜ. 16: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಒಕ್ಕಲಿಗರ ಸಂಘ, ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್ ವತಿಯಿಂದ ತಾ. 17 ರಂದು (ಇಂದು) ಪೂವಾಹ್ನ 10.30ಕ್ಕೆ ಇಲ್ಲಿನ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ‘ಪತ್ರಿಕೋದ್ಯಮದಲ್ಲಿರುವ ಮುಂದಿನ ಅವಕಾಶಗಳು’ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಲಿದೆ.
ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ ಉದ್ಘಾಟಿಸಲಿದ್ದಾರೆ. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ರೈ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಎ. ಮುರಳೀಧರ್, ಒಕ್ಕಲಿಗರ ಸಂಘದ ಸಂಚಾಲಕ ಕೆ.ಎಂ. ಜಗದೀಶ್, ಟ್ರಸ್ಟ್‍ನ ಅಧ್ಯಕ್ಷ ಹೆಚ್.ಆರ್. ಸುರೇಶ್, ಪ್ರಾಂಶುಪಾಲ ಎಚ್.ಎಸ್. ಶರಣ್ ಅವರುಗಳು ಭಾಗವಹಿಸಲಿದ್ದಾರೆ.
ಎಸ್‍ಡಿಎಂ ಕಾಲೇಜಿನ ಕೆ.ಎನ್. ಸ್ಕಂದ ಮತ್ತು ಸಿನಿಮಾ ಸಹಾಯಕ ನಿರ್ದೇಶಕ ಗಣಪತಿ ದಿವಾಣ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಾಲೂಕು ಸಂಘದ ಕಾರ್ಯದರ್ಶಿ ವಿಜಯ್ ಹಾನಗಲ್ ತಿಳಿಸಿದ್ದಾರೆ.