ಮಡಿಕೇರಿ, ಜ. 16: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಕಾನ್‍ಸ್ಟೆಬಲ್ ಬಲಮುರಿಯ ಬೆಳ್ಯಪ್ಪ (64) ಸೋಮವಾರ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರೋಗ ಪೂರ್ಣ ಗುಣಮುಖವಾಗದೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30 ರ ವೇಳೆಗೆ ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.