ಗೋಣಿಕೊಪ್ಪ ವರದಿ, ಜ. 16: ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪಲು ಗ್ರಾಮದ ಜನತೆಗೆ ಕುಡಿಯುವ ನೀರು ಕಲ್ಪಿಸಲು ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು ಭೂಮಿಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ ಅನುದಾನದ ರೂ. 7 ಲಕ್ಷ ಕಾಮಗಾರಿಗೆ ಪೂಜೆ ನೆರವೇರಿತು. ಈ ಸಂದರ್ಭ ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂಡೇರ ಕುಸುಮ, ಉಪಾಧ್ಯಕ್ಷ ಕೊಕ್ಕೇಂಗಡ ರಂಜನ್, ಸದಸ್ಯ ಅಚ್ಚುತ್ತ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.