ಕೂಡಿಗೆ, ಜ. 16 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯ ಹುದ್ದೆ ಕಳೆದ ಮೂರು ತಿಂಗಳಿನಿಂದ ಖಾಲಿ ಇದ್ದು, ಇದೀಗ ತಲಕಾಡು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಂದೀಶ್ ಅವರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇವರು ಕಳೆದ ಮೂರು ವರ್ಷಗಳ ಹಿಂದೆ ಸೋಮವಾರಪೇಟೆ ಠಾಣಾಧಿಕಾರಿಯಾಗಿ ಸೇವೆಸಲ್ಲಿಸಿದ್ದರು.