ಸೋಮವಾರಪೇಟೆ, ಜ. 14: ಇಲ್ಲಿನ ಪಟ್ಟಣ ಪಂಚಾಯಿತಿಯ 2019-20ನೇ ಸಾಲಿನ ಆಯವ್ಯಯ ತಯಾರಿಸುವ ಬಗ್ಗೆ ತಾ. 16 ರಂದು ಪೂರ್ವಾಹ್ನ 11.30ಕ್ಕೆ ಪ.ಪಂ. ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಾಲೂಕು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಮುಖ್ಯಾಧಿಕಾರಿ ನಟರಾಜ್ ತಿಳಿಸಿದ್ದಾರೆ.