ಮಡಿಕೇರಿ, ಜ. 14: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ತಾ. 18 ರಂದು ಬೆಳಿಗ್ಗೆ 10.30 ಗಂಟೆಗೆ ಅಲ್ಲಿನ ಆರ್‍ಎಂಸಿ ಸಭಾಂಗಣದಲ್ಲಿ ಚಾಲನೆ ಲಭಿಸಲಿದೆ. ಜಿಲ್ಲಾ ಸಂಘದ ಅಧ್ಯಕ್ಷೆ ಸವಿತಾ ರೈ ಉದ್ಘಾಟನೆಯೊಂದಿಗೆ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಚಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಪದಾಧಿಕಾರಿಗಳು, ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.