ಸೋಮವಾರಪೇಟೆ, ಜ. 16: ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸಿದರು. ಸಿವಿಲ್ ನ್ಯಾಯಾಧೀಶ ಭರತ್, ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ, ತಾಲೂಕು ತಹಶೀಲ್ದಾರ್ ಮಹೇಶ್, ವಿದ್ಯಾಸಂಸ್ಥೆಯ ಪ್ರಾಂಶುಪಾಲ ಫಾ. ರಾಯಪ್ಪ, ಟೆನ್ನಿ ಕುರಿಯನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.