ವೀರಾಜಪೇಟೆ, ಜ. 16: ಕಾಂಗ್ರೆಸ್ ಪಕ್ಷದ ಕೊಡಗು ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷ ದಿ. ಬಿ.ಟಿ. ಪ್ರದೀಪ್ ಅವರ ಸ್ಮರಣಾರ್ಥ ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿ ಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ಈ ಸಂದರ್ಭ ಬ್ಲಾಕ್ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ರಂಜಿ ಪೂಣಚ್ಚ, ಡಿ.ಪಿ. ರಾಜೇಶ್, ಮಹಮ್ಮದ್ ರಾಫಿ, ಎಸ್.ಹೆಚ್. ಮತೀನ್, ಆಗಸ್ಟಿನ್, ಎಂ.ಕೆ. ದೇಚಮ್ಮ. ನಗರ ಸಮಿತಿ ಅಧ್ಯಕ್ಷ ಜಿ.ಜಿ. ಮೋಹನ್ ಮತ್ತಿತರರು ಹಾಜರಿದ್ದರು.