ಮಡಿಕೇರಿ, ಜ. 17: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅದರಲ್ಲಿ 4,35,261 ಮತದಾರರಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 4,34,256 ಮತದಾರರಿದ್ದಾರೆ. ಹೊಸದಾಗಿ 5,444 ಮತದಾರರು (2502 ಪುರುಷರು ಹಾಗೂ 2942 ಮಹಿಳೆಯರು) ಸೇರ್ಪಡೆಯಾಗಿದ್ದಾರೆ. ಜೊತೆಗೆ 6,449 ಮತದಾರರನ್ನು (ಮೃತ, ಸ್ಥಳಾಂತರ ಮತ್ತು ಪುನರಾವರ್ತನೆಗೊಂಡಿರುವ ಕಾರಣಗಳಿಂದ) ಮತದಾರರ ಪಟ್ಟಿಯಿಂದ ಕೈಬಿಡಲಾಗಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಲೋಕಸಭಾ ಚುನಾವಣಾ ಹಿನ್ನೆಲೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಮತದಾರರ ಪಟ್ಟಿಯಲ್ಲಿ ಎಲ್ಲಾ ಅರ್ಹ ಮತದಾರರು ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳು ವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು.
ಅರ್ಹ ನಾಗರಿಕರ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ ಈಗಲೂ ಸಹ ನಮೂನೆ 6 ರಲ್ಲಿ ಅರ್ಜಿಯನ್ನು ನಿಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲೂಕು ಕಚೇರಿಗೆ ಸಲ್ಲಿಸಬಹುದು. ಹಾಗೆಯೇ ಮೃತ, ಸ್ಥಳಾಂತರ, ಪುನರಾವರ್ತನೆ ಆಗಿರುವ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ತೆಗೆಯಲು ನಮೂನೆ 7ರಲ್ಲಿ ಅರ್ಜಿಯನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಹಾಗೂ ತಾಲೂಕು ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ವಿವರಿಸಿದರು.
ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ತಾ. 25 ರಂದು ಮತದಾರರ ದಿನಾಚರಣೆಯನ್ನು ಪ್ರತಿ ಬೂತ್ ಮಟ್ಟದಲ್ಲಿ, ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುವದು. ಈ ದಿನದಂದು ಹೊಸದಾಗಿ ಸೇರ್ಪಡೆಯಾಗಿರುವ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡಿ ಸನ್ಮಾನಿಸಲಾಗುವದು ಎಂದರು.
ಭಾರತ ಚುನಾವಣಾ ಆಯೋಗವು ಪ್ರತಿ ಜಿಲ್ಲೆಯಲ್ಲೂ ಆisಣಡಿiಛಿಣ ಅoಟಿಣಚಿಛಿಣ ಅeಟಿಣಡಿe ಣoಟಟ ಜಿಡಿee 1950 (ಗಿoಣeಡಿs ಊeಟಠಿಟiಟಿe) ಸ್ಥಾಪಿಸಿದೆ. ಈ ಕೇಂದ್ರವು ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆವರೆಗೆ ಕರ್ತವ್ಯ ನಿರ್ವಹಿಸಲಿದೆ.
ಮತದಾರರು ಮತದಾರರ ಪಟ್ಟಿ ಬಗ್ಗೆ, ಮತಗಟ್ಟೆ ಬಗ್ಗೆ ತಿಳಿದುಕೊಳ್ಳಲು ಮತ್ತು ಚುನಾವಣೆ ಸಮಯದಲ್ಲಿ ದೂರುಗಳನ್ನು ನೀಡಲು 1950 ಕ್ಕೆ ಕರೆ ಮಾಡಬಹುದಾಗಿದೆ ಎಂದು ವಿವರಿಸಿದರು.
ಪ್ರಮುಖರೊಂದಿಗೆ ಸಭೆ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರಮುಖರಾದ ಸಜೀಲ್ ಕೃಷ್ಣ (ಬಿಜೆಪಿ), ತೆನ್ನೀರ ಮೈನಾ (ಕಾಂಗ್ರೆಸ್), ಅಜಿತ್ ಕುಮಾರ್ (ಜೆಡಿಎಸ್), ಅಪ್ಪಣ್ಣ, ಶಾಮರಾಜ್ ಇತರರು ಇದ್ದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಪರಿಶೀಲಿಸಿಕೊಳ್ಳು ವಂತಾಗಬೇಕು. ಯಾರಾದರು ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ ಮಾಡಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ರಾಜಕೀಯ ಪಕ್ಷಗಳ ಮುಖಂಡರು ಚುನಾವಣಾ ಮತದಾ ರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು.