ಮಡಿಕೇರಿ, ಜ.17: ಹಿರಿಯ ನಾಗರಿಕರ ವೇದಿಕೆಯ ಸಾಮಾನ್ಯ ಸಭೆಯು ಅಧ್ಯಕ್ಷ ಕೊಂಗಾಂಡ ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 19 ರಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರ ರಸ್ತೆಯಲ್ಲಿರುವ ಕ್ಯಾಪಿಟಲ್ ವಿಲೇಜ್‍ನಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಮನೋಹರ್ ಜಿ.ಪಾಟ್ಕರ್, ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಇತರರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 9448422279, 9972167576 ಮತ್ತು 9448292477 ನ್ನು ಸಂಪರ್ಕಿಸಬಹುದು.