ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ಯೂತ್ ರೆಡ್ ಕ್ರಾಸ್ ಸಮಿತಿಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಭಾಷಣಕಾರ ‘ಶಕ್ತಿ’ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್ ಮತ್ತು ಕಾಲೇಜಿನ ಪ್ರಾಂಶುಪಾಲರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ಆರ್ಚನೆ ಮಾಡುವದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ. ವೈ ಅವರು ವಹಿಸಿ ವಿವೇಕಾನಂದರ ಕುರಿತು ಜೀವನದಲ್ಲಿ ತಿಳಿದುಕೊಳ್ಳುವದು ಅತ್ಯಂತ ಹೆಮ್ಮೆಯ ವಿಷಯವೆಂದು ನೆನಪಿಸಿದರು. ವಿದ್ಯಾರ್ಥಿಗಳು ಇಂತಹ ಮಹಾನ್ ವ್ಯಕ್ತಿಗಳ ಕುರಿತು ಹೆಚ್ಚಿನ ಅಧ್ಯಯನದೊಂದಿಗೆ ಒಳ್ಳೆಯ ಮಾರ್ಗದಲ್ಲಿ ಮುನ್ನಡೆಯುವಂತೆ ಸಲಹೆ ನೀಡಿದರು.

‘ಶಕ್ತಿ’ಯ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್ ದಿನದ ಮಹತ್ವದೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ.ಸಿ. ದಯಾನಂದ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಅಧ್ಯಯನದೊಂದಿಗೆ ವಿವೇಕಾನಂದರ ಆದರ್ಶಗಳನ್ನು ಜೀವದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವೀರಾಜಪೇಟೆ: ವಿದ್ಯಾರ್ಥಿಗಳು ಮಾದಕ ವಸ್ತು ಸೇರಿದಂತೆ ಇತರ ದುಶ್ಚಟಗಳನ್ನು ದೂರವಿಟ್ಟು ಗುಣಮಟ್ಟದ ಶಿಕ್ಷಣವನ್ನು ಪಡೆದು ತಮ್ಮ ಜೀವನದ ಗುರಿಯನ್ನು ಸಾಧಿಸುವಂತಾಗಬೇಕು ಎಂದು ಇಲ್ಲಿನ ಸಮುಚ್ಚಯ ನ್ಯಾಯಾಲಯಗಳ ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಾನಂದ ಲಕ್ಷ್ಮಣ ಅಂಚಿ ಹೇಳಿದರು.

ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ನಗರ ಪೊಲೀಸ್ ಠಾಣೆ, ಹಾಗೂ ಕಾವೇರಿ ಪದವಿ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಮಾದಕ ವ್ಯಸನ ವಿರೋಧಿ ದಿನದ ಅಂಗವಾಗಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರಂತೆ ದೇಶದ ಅಭಿವೃದ್ಧಿಗೋಸ್ಕರ ಚಿಂತಿಸುವ ಮೂಲಕ ಯುವಕರು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯು ಭಾಗಿಯಾಗಬೇಕು ಎಂದರು.

ಅತಿಥಿಯಾಗಿ ಭಾಗವಹಿಸಿದ್ದ ನಗರ ಪೊಲೀಸ್ ಠಾಣಾಧಿಕಾರಿ ಸಂತೋಷ್ ಕಶ್ಯಪ್ ಮಾತನಾಡಿ, ಜೀವನದಲ್ಲಿ ಏನೇ ಕಷ್ಟಗಳು ಬಂದರೂ ಅದನ್ನು ಧೈರ್ಯದಿಂದ ಎದುರಿಸಿ ಯುವಕರು ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತಾಗಬೇಕೆಂದು ಹೇಳಿದರು.

ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಸಿ.ಎಂ. ನಾಚಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಅಭಿವೃದ್ಧಿ ಹೊಂದಲು ವಿದ್ಯಾರ್ಥಿಗಳೊಂದಿಗೆ ಪ್ರತಿಯೊಬ್ಬರು ಸೇರಿದರೆ ದೇಶದ ಏಳಿಗೆ ಸಾಧ್ಯ ಎಂದರು. ವಕೀಲ ರಫೀಕ್ ಹೆಚ್. ನವಲಗುಂದ ತಮ್ಮ ಉಪನ್ಯಾಸದಲ್ಲಿ ಮಕ್ಕಳಿಗೆ ಶಿಕ್ಷಣವೇ ಮುಖ್ಯ, ಪುಸ್ತಕದ ಜ್ಞಾನದೊಂದಿಗೆ ಹೊರಗಿನ ಜ್ಞಾನವು ಅಗತ್ಯ ಎಂದು ಹೇಳಿದರು.

ಸೋಮವಾರಪೇಟೆ: ಸ್ವಾಮಿ ವಿವೇಕಾನಂದರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಢಿಸಿಕೊಂಡರೆ ಜೀವನದಲ್ಲಿ ಕ್ರಾಂತಿಕಾರಕ ಬದಲಾವಣೆ ಕಾಣಬಹುದು ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ಹೇಳಿದರು.

ತಾಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಪದವಿಪೂರ್ವ ಕಾಲೇಜು ಮತ್ತು ಸೋಮವಾರಪೇಟೆ ಸ್ಪಂದನ ಗ್ರಾಮಿಣ ಶಿಕ್ಷಣಾಭಿವೃದ್ಧಿ ಟ್ಟಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನೋತ್ಸವ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ವಿವೇಕವಂತರಾಗಬೇಕು. ದೇಶಾಭಿಮಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜದ ಆಸ್ತಿಯಾಗಬೇಕು ಎಂದು ಕಿವಿಮಾತು ಹೇಳಿದರು. ಕಳಲೆಯ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶಿಕ್ಷಕ ಕಾಂತರಾಜು ಮಾತನಾಡಿ, ಅತೀವ ಚೈತನ್ಯಶೀಲರಾಗಿದ್ದ ಸ್ವಾಮಿ ವಿವೇಕಾನಂದರು ಭಾರತದ ಭವಿಷ್ಯದ ಕನಸು ಕಂಡವರು. ಅವರಂತಹ ಚೈತನ್ಯ ಎಲ್ಲರಲ್ಲಿಯೂ ಇದ್ದು, ಅದನ್ನು ಜಾಗ್ರತಗೊಳಿಸುವ ಕಾರ್ಯ ಆಗಬೇಕು. ಆ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಹೆಚ್.ಎಸ್. ಶರಣ್ ಮಾತನಾಡಿ, ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಭಾರತದ ಕೀರ್ತಿಯನ್ನು ವಿಶ್ವದಾದ್ಯಂತ ಹೊರ ಚಿಮ್ಮಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಬಣ್ಣಿಸಿದರು.

ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯೋಗೇಶ್, ಪ್ರತಾಪ್ ಅವರುಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಮಣಿಕಂಠ, ಭೂಮಿಕ, ಸಿಂಚನಾ, ಸೂಕ್ತಿ, ವಿವೇಕಾನಂದರ ಜೀವನದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ಈ ಸಂದರ್ಭ ಉಪ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ” ವಿವೇಕಾನಂದರ ಸಂದೇಶ ಹಾಗೂ ತತ್ವಗಳು ಸಾರ್ವಕಾಲಿಕ ವಾಗಿದ್ದು. ಯುವ ಜನಾಂಗ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸದೃಢ ಭಾರತ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು” ಎಂದರು. ಪ್ರೊ. ಎ.ಎಸ್. ಪೂವಮ್ಮ, ಪ್ರೊ. ಎಂ.ಎಸ್. ಭಾರತಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎನ್‍ಎಸ್ ಎಸ್ ಅಧಿಕಾರಿಗಳಾದ ಎಂ.ಎನ್. ವನಿತ್‍ಕುಮಾರ್, ಎನ್.ಪಿ. ರೀತಾ, ಎನ್.ಸಿ.ಸಿ ಅಧಿಕಾರಿ ಡಾ. ಬೀನ, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಇದ್ದರು.ಮೂರ್ನಾಡು: ವಿವೇಕಾನಂದರ ಜನ್ಮ ದಿನಾಚರಣೆ ಭಾರತದ ಸಂಭ್ರಮವಷ್ಟೆ ಅಲ್ಲ, ಪ್ರಪಂಚದ ಸಂಭ್ರಮವಾಗಿದೆ ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಎನ್.ಟಿ. ಸಚಿನ್ ಗೌಡ ಹೇಳಿದರು.

ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಮತ್ತು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಆಚರಣಾ ಸಮಿತಿಯ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸತ್ಯ, ನ್ಯಾಯ, ಸಹಕಾರ, ಸಹಾನುಭಾವ, ಭ್ರಾತೃತ್ವಗಳನ್ನು ಅಳವಡಿಸಿಕೊಂಡು ಬದುಕವದೇ ಧರ್ಮ. ಈಗಿನ ವಿದ್ಯಾರ್ಥಿಗಳು ಧರ್ಮದ ಬಗ್ಗೆ ತಿಳಿದುಕೊಳ್ಳಬೇಕು. ದೇವರನ್ನು ತಾಯಿಯಲ್ಲಿ ಕಾಣಬೇಕು. ಭಾವನೆಗಳಲ್ಲಿರುವ ನೆಮ್ಮದಿ ಹಣದಲ್ಲಿ ಸಿಗುವದಿಲ್ಲ. ಶಿಕ್ಷಣದಲ್ಲಿ ಸ್ವಅನುಭವವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ, ಮಹಾಭಾರತವನ್ನು ತಿಳಿಯಬೇಕಾದರೆ ಶ್ರೀಕೃಷ್ಣನನ್ನು ತಿಳಿದರೆ ಸಾಕು, ಭಾರತವನ್ನು ತಿಳಿಯಬೇಕಾದರೆ ಸ್ವಾಮಿ ವಿವೇಕಾನಂದರನ್ನು ಅರಿತುಕೊಂಡರೆ ಸಾಕು. ಭಾರತ ದೇಶ ಪ್ರಪಂಚಕ್ಕೆ ಮಾರ್ಗದರ್ಶಕವಾಗಿದೆ ಎಂದು ಹೇಳಿದರು. ವೇದಿಕೆಯಲ್ಲಿ ಜಿಲ್ಲಾ ಸ್ವಾಮಿ ವಿವೇಕಾನಂದ ಜಯಂತಿ ಆಚರಣಾ ಸಮಿತಿಯ ಸದಸ್ಯ ಶ್ಯಾಮ್ ಪ್ರಸಾದ್, ಪಳಂಗಂಡ ಅಪ್ಪಣ್ಣ, ರಮೇಶ್, ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಯು.ಸಿ. ಮಾಲತಿ, ಪದವಿ ಕಾಲೇಜಿನ ಎನ್‍ಎಸ್‍ಎಸ್ ಯೋಜನಾಧಿಕಾರಿ ನೆರ್ಪಂಡ ಹರ್ಷ ಮಂದಣ್ಣ, ಪದವಿ ಕಾಲೇಜಿನ ಆಂತರಿಕ ಗುಣಮಟ್ಟ ಮೌಲ್ಯಮಾಪನ ಸಮಿತಿ ಸಂಚಾಲಕ ನಾಟೋಳಂಡ ನವೀನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಅಮೃತ ತಂಡ ಪ್ರಾರ್ಥಿಸಿ, ರೋಷನ್ ಶರೀಫ್ ಸ್ವಾಗತಿಸಿ, ಶ್ರೀರಕ್ಷ ಕಾರ್ಯಕ್ರಮ ನಿರೂಪಿಸಿ, ನಾಟೋಳಂಡ ನವೀನ್ ವಂದಿಸಿದರು.

ನಾಪೆÇೀಕ್ಲು: ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 250 ಪುಸ್ತಕಗಳನ್ನು ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಸಂಸ್ಥೆಗೆ ಕೊಡುಗೆಯಾಗಿ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಬೊಪ್ಪಂಡ ಡಾ. ಜಾಲಿ ಬೋಪಯ್ಯ ಅವರಿಗೆ ಪುಸ್ತಕ ಹಸ್ತಾಂತರಿಸಿದರು.

ಈ ಸಂದರ್ಭ ಸಂಸ್ಥೆಯ ನಿರ್ದೇಶಕರಾದ ಪೆÇ್ರ. ಕಲ್ಯಾಟಂಡ ಪೂಣಚ್ಚ, ಅರೆಯಡ ಡಿ. ಸೋಮಪ್ಪ, ಪ್ರಾಂಶುಪಾಲೆ ಬಿ.ಎಂ. ಶಾರದ, ಶಿಕ್ಷಕಿ ಟಿ.ಆರ್. ಸುಬ್ಬಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಹೊದ್ದೂರು ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ದಿನೇಶ್, ಉಪಪ್ರಾಂಶುಪಾಲೆ ಪಿ.ಕೆ. ನಳಿನಿ, ಕ.ಸಾ.ಪ.ದ ಹಿರಿಯ ಸದಸ್ಯ ಬೊಪ್ಪೇರ ಸಿ. ಕಾವೇರಪ್ಪ, ಜಿಲ್ಲಾ ಸಮಿತಿ ಕೋಶಾಧ್ಯಕ್ಷ ಮುರಳೀಧರ್, ಸದಸ್ಯೆ ಕೆ.ಬಿ. ಉಷಾರಾಣಿ, ಘಟಕದ ಅಧ್ಯಕ್ಷ ಸಿ.ಎಸ್. ಸುರೇಶ್ ಇದ್ದರು.

ಕುಶಾಲನಗರ: ದಾರ್ಶನಿಕರು, ಮಹಾನ್ ಚೇತನಗಳ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಿದೆ ಎಂದು ಮೈಸೂರಿನ ಅಷ್ಟಾಂಗ ಮಾರ್ಗ ಧ್ಯಾನ ಮಂದಿರದ ಸಂಸ್ಥಾಪಕ ಶ್ರೀ ಭಂತೆ ಬೋಧಿದತ್ತ ಕರೆ ನೀಡಿದ್ದಾರೆ. ಕೂಡುಮಂಗಳೂರು ಟುಲಿಪ್ ಟ್ರಸ್ಟ್ ವತಿಯಿಂದ ಸ್ಥಳೀಯ ಗಾಯತ್ರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದೇಶ ಪ್ರೇಮಿಗಳಾಗಬೇಕು. ಸರಿ ತಪ್ಪುಗಳ ನಡುವಿನ ವ್ಯತ್ಯಾಸಗಳನ್ನು ಗುರುತಿಸಿ ಕಾರ್ಯ ಪ್ರವೃತರಾಗಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡಲ್ಲಿ ಹೆಚ್ಚಿನ ಜ್ಞಾನಾರ್ಜನೆ ದೊರಕಲು ಸಾಧ್ಯ ಎಂದರು.

ಸ್ವಾಮಿ ವಿವೇಕಾನಂದ, ಗೌತಮ ಬುದ್ದ ಅಂತಹ ಮಹಾ ಚೇತನಗಳ ಸ್ಮರಣೆ ಮೂಲಕ ಅವರ ಮಾರ್ಗದರ್ಶನ ನಮ್ಮ ಜೀವನದ ದಾರಿದೀಪವಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕಅಳುವಾರದ ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕ ಡಾ. ಮಹಾಂತೇಶ್ ಪಾಟೀಲ್ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕರುಗಳಾದ ನಟರಾಜ್, ಕೆ.ಜೆ. ರಾಬಿನ್, ಮಡಿಕೇರಿಯ ವಿಕಾಸ್ ಸೇವಾ ಟ್ರಸ್ಟ್‍ನ ಅಧ್ಯಕ್ಷ ರಮೇಶ್ ಪಾಲ್ಗೊಂಡಿದ್ದರು.

ಟುಲಿಪ್ ಟ್ರಸ್ಟ್ ಅಧ್ಯಕ್ಷ ಚಂದನ್, ಕಾರ್ಯದರ್ಶಿ ಸಹನ, ಖಜಾಂಚಿ ಜಗ್ಗೇಶ್, ಟ್ರಸ್ಟಿ ನಿರಂಜನ್ ಇದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ನಾಟಕ, ಚರ್ಚಾ ಸ್ಪರ್ಧೆಗಳು ನಡೆಯಿತು.

ಮಡಿಕೇರಿ: ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆಯ ಅಂಗವಾಗಿ ಟೀಮ್ ಮೋದಿ ಸಂಘಟನೆ ನೇತೃತ್ವದಲ್ಲಿ ಗೋಣಿಕೊಪ್ಪಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಮಾಡುವದರ ಮೂಲಕ ಜನ್ಮ ದಿನವನ್ನು ಆಚರಿಸಿದರು. ಅಲ್ಲದೆ ಆಸ್ಪತ್ರೆ ಸ್ವಚ್ಛವಾಗಿದ್ದರೆ ನಗರವೇ ಸ್ವಚ್ಛವಾಗಿರುತ್ತದೆ ಎಂಬ ಉದ್ದೇಶದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲಿರ ಚಲನ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಗ್ರಾಮ ಪಂಚಾಯಿತಿ ಸದಸ್ಯ ಮಂಜು ರೈ,ಟೀಮ್ ಮೋದಿ ಜಿಲ್ಲಾ ಪ್ರಮುಖರಾದ ಕುಲ್ ದೀಪ್ ಪೂಣಚ್ಚ, ತಾಲೂಕು ಪ್ರಮುಖರಾದ ಮಾಚ್ಚಿಟಿರ ಸಚಿನ್, ಚೆನ್ನಯನಕೋಟೆ ಗ್ರಾಮ ಪಂಚಾಯತಿ ಸದಸ್ಯ ಕುಯಮುಡಿ ರತನ್, ಭರತ್, ಪುನೀತ್, ಆಂಟೋನಿ, ಪ್ರವೀಣ್ ಪೂಜಾರಿ, ಮಂಜು, ಪುಷ್ಪರಾಜ್, ಸಚಿನ್ ಹಾಗೂ ಐವತ್ತಕ್ಕೂ ಅಧಿಕ ಸದಸ್ಯರು ಉಪಸ್ಥಿತರಿದ್ದರು.*ಗೋಣಿಕೊಪ್ಪ: ಪಟ್ಟಣದ ಟೀಮ್ ಮೋದಿ ಸಂಘಟನೆ ನೇತೃತ್ವದಲ್ಲಿ ಗೋಣಿಕೊಪ್ಪಲಿನ ಸಮುದಾಯ ಆರೋಗ್ಯ ಕೇಂದ್ರÀವನ್ನು ಸ್ವಚ್ಛತೆ ಮಾಡುವದರ ಮೂಲಕ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆ ಆಚರಿಸಲಾಯಿತು.

ಆರೋಗ್ಯ ಕೇಂದ್ರದ ಅವರಣವನ್ನು ಹಾಗೂ ಹೂ ತೋಟದಲ್ಲಿ ಬೆಳೆದ ಗಿಡ ಗಂಟಿಗಳನು, ಪ್ಲಾಸ್ಟಿಕ್ ತಾಜ್ಯಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ವೀರಾಜಪೇಟೆ ತಾಲೂಕು ಉಪಾಧ್ಯಕ್ಷ ನೆಲ್ಲಿರ ಚಲನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜೇಶ್, ಸದಸ್ಯ ಮಂಜುರೈ, ಟೀಮ್ ಮೋದಿ ಜಿಲ್ಲಾ ಪ್ರಮುಖ ಕುಲ್‍ದೀಪ್ ಪೂಣಚ್ಚ, ತಾಲೂಕು ಪ್ರಮುಖ ಮಾಚ್ಚಿಟಿರ ಸಚಿನ್, ಚೆನ್ನಯನಕೋಟೆ ಗ್ರಾಮ ಪಂಚಾಯಿತಿ ಸದಸ್ಯ ಕುಯ್ಯಮುಡಿ ರತನ್ ಮೊದಲಾದವರು ಹಾಜರಿದ್ದರು.

ಸೋಮವಾರಪೇಟೆ: ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್. ಸದಾನಂದ್ ಅವರು ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವೀರ ಸನ್ಯಾಸಿ ವಿವೇಕಾನಂದರ ಆದರ್ಶಗಳು ಸಾರ್ವಕಾಲಿಕವಾಗಿದ್ದು, ಎಲ್ಲರೂ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ತಾ. 28 ರಂದು ಸೋಮವಾರಪೇಟೆಯಲ್ಲಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವದು. ಇದರೊಂದಿಗೆ ತಾ. 23 ರಂದು ಇಲ್ಲಿನ ಮಾನಸ ಸಭಾಂಗಣದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವೇಕಾನಂದರ ಕುರಿತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವದು ಎಂದು ತಿಳಿಸಿದರು. ಸೋಮವಾರಪೇಟೆ ರೋಟರಿ ಹಿಲ್ಸ್ ಅಧ್ಯಕ್ಷ ಪಿ.ಕೆ. ರವಿ, ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ವಿವೇಕಾನಂದ ಯುವ ಬ್ರಿಗೇಡ್‍ನ ಅಭಿಷೇಕ್ ಗೋವಿಂದಪ್ಪ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಿರ್ವಾಣಿ ಶೆಟ್ಟಿ, ಪ.ಪಂ. ಸದಸ್ಯ ಶುಭಕರ್, ಜ್ಞಾನವಿಕಾಸ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ರೋಟರಿ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಗೋಣಿಕೊಪ್ಪ ವರದಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ವೀರಾಜಪೇಟೆ ಶಾಖೆ ವತಿಯಿಂದ ಅಲ್ಲಿನ ಕಾವೇರಿ ಕಾಲೇಜು ಸಭಾಂಗಣದಲ್ಲಿ ಆಚರಿಸಲಾಯಿತು.

ವಿವೇಕಾನಂದ ಭಾವಚಿತ್ರಕ್ಕೆ ಹೂ ಸಮರ್ಪಿಸುವ ಮೂಲಕ ಗೌರವ ನೀಡಲಾಯಿತು. ಮುಖ್ಯ ಭಾಷಣಕಾರರಾಗಿ ಹಿರಿಯ ವೈದ್ಯ ಡಾ. ಶಿವಪ್ಪ ಪಾಲ್ಗೊಂಡು ಮಾತನಾಡಿ, ದೇಶಭಕ್ತಿ ಮೈಗೂಡಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ಸಂದೇಶಗಳನ್ನು ತಮ್ಮ ಜೀವನದಲ್ಲಿ ಪಾಲಿಸುವದು ಉತ್ತಮ. ಅವರ ತತ್ವಗಳನ್ನು ನಾವು ಪಾಲಿಸಬೇಕು ಎಂದರು.

ಎಬಿವಿಪಿ ಜಿಲ್ಲಾಧ್ಯಕ್ಷ ಆನಂದ್ ಕಾರ್ಲ ಮಾತನಾಡಿದರು. ಪ್ರಾಂಶುಪಾಲ ಸಿ.ಎಂ. ನಾಚಪ್ಪ, ಎಬಿವಿಪಿ ತಾಲೂಕು ಸಂಚಾಲಕ ಶಿನೋಜ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಪೂಜ್ಯ, ವಿದ್ಯಾರ್ಥಿನಿ ಪ್ರಮುಖ್ ವಿಖಿತ, ನಿರ್ಮಿತ, ಕಾರ್ಯಕರ್ತರುಗಳಾದ ರಂಜಿತ್, ಕವನ, ನರ್ತನ, ಪ್ರಭಿತ ಹಾಗೂ ಪ್ರಜ್ವಲ್ ಬೋಪಯ್ಯ ಪಾಲ್ಗೊಂಡಿದ್ದರು.

ಸೋಮವಾರಪೇಟೆ: ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಸದಸ್ಯ ಎ.ಎಸ್. ಮಹೇಶ್ ಬಹುಮಾನ ವಿತರಿಸಿದರು. ನಂತರ ತುಮಕೂರಿನ ರಾಮಚಂದ್ರಪ್ಪ ನಡೆಸಿಕೊಟ್ಟ ಮ್ಯಾಜಿಕ್ ಶೋ ವಿದ್ಯಾರ್ಥಿಗಳನ್ನು ರಂಜಿಸಿತು.ಮಡಿಕೇರಿ: ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.

ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬೀನಾ ಬೊಳ್ಳಮ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ‘ಶಕ್ತಿಯೇ ಜೀವನ ದೌರ್ಬಲ್ಯವೇ ಮರಣ’ ಎಂಬದನ್ನು ಬೋಧಿಸಿದ ದಿವ್ಯತ್ರಯರಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರು ಭಾರತೀಯ ಯುವಜನತೆಗೆ ‘ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೆ ವಿರಮಿಸದಿರಿ’ ಎಂದು ಎಚ್ಚರಿಸುವ ಮೂಲಕ ರಾಷ್ಟ್ರದ ಬೆಳವಣಿಗೆಯಲ್ಲಿ ಯುವಶಕ್ತಿಯ ಮಹತ್ವವನ್ನು ಪ್ರತಿಪಾದಿಸಿದ್ದರು ಎಂದರು.

ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು ಇಂದಿನ ಯುವಪೀಳಿಗೆಯ ಬೆಳವಣಿಗೆಗೆ ಹೇಗೆ ಪೂರಕವಾಗಿದೆ ಎಂಬದನ್ನು ಪ್ರಸ್ತಾಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಸಿ. ಜೆನಿಫರ್ ಲೋಲಿಟ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಹೆಚ್.ಪಿ. ನಿರ್ಮಲಾ ಹಾಗೂ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಕೆ. ಸರಸ್ವತಿ ಉಪಸ್ಥಿತರಿದ್ದರು.

ಭವ್ಯ ಮತ್ತು ದೀಕ್ಷಿತಾ ಪ್ರಾರ್ಥಿಸಿ, ಆಸ್ಲಿನ್ ಜ್ಯೋತಿ ಸ್ವಾಗತಿಸಿದರು. ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು, ಭವ್ಯ ವಂದಿಸಿದರು.

ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಇದು ಕೇವಲ ಭಾರತದ ಸಂಭ್ರಮ ಮಾತ್ರವಲ್ಲ ಇದು ವಿಶ್ವದ ಸಂಭ್ರಮವಾಗಿದೆ ಎಂದು ಕಾರ್ಯಕ್ರಮದ ಮುಖ್ಯ ಭಾಷಣಕಾರ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಎನ್.ಟಿ. ಸಚಿನ್‍ಗೌಡ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಅವರು ವಿವೇಕಾನಂದರ ಜೀವನ ಎಲ್ಲರಿಗೂ ಮಾದರಿಯಾಗಬೇಕು. ಅವರ ತತ್ವ ಹಾಗೂ ಚಿಂತನೆಗಳನ್ನು ಎಲ್ಲರೂ ಅರಿಯಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದರು.

ನಾಪೋಕ್ಲು: ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಇಂಟರ್‍ಆಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದರ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನಾಚರಣೆಯಾಗಿ ಆಚರಿಸಲಾಯಿತು. ಸಮಾರಂಭದಲ್ಲಿ ಪ್ರಾಂಶುಪಾಲೆ ಬಿ.ಎಂ. ಶಾರದ ವಿವೇಕಾನಂದರ ಬಗ್ಗೆ ಮಾಹಿತಿ ನೀಡಿದರು. ಇಂಟರ್‍ಆಕ್ಟ್ ಕ್ಲಬ್ ಸಂಯೋಜಕಿ ಟಿ.ಆರ್. ಸುಬ್ಬಮ್ಮ, ಯುವಶಕ್ತಿಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಕರಾದ ಎಂ.ಎಂ. ಕವಿತ, ಕಾಳಯ್ಯ ಹಾಗೂ ಇಂಟರ್‍ಆಕ್ಟ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಪಾಲ್�??