ಸೋಮವಾರಪೇಟೆ,ಜ.17: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಸಂಘದ ಸದಸ್ಯರುಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ದಿ. 19ರಂದು ಬೇಳೂರುಬಾಣೆಯ ಹಾಲಿನ ಡೈರಿ ಸಮೀಪದಲ್ಲಿ ರಾಸುಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಸಂಘದ ಅಧ್ಯಕ್ಷರಾಗಿದ್ದ ಬಿ.ಬಿ. ಸೋಮಶೇಖರ್‍ರವರ ಸ್ಮರಣಾರ್ಥವಾಗಿ ಆಯೋಜಿಸಿರುವ ಶಿಬಿರದಲ್ಲಿ ಉತ್ತಮ ತಳಿಯ ರಾಸುಗಳಿಗೆ ಬಹುಮಾನವನ್ನು ವಿತರಿಸುವ ಮೂಲಕ ಪ್ರೋತ್ಸಾಹಿಸಲಾಗುವದು.
ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಶಿಬಿರವನ್ನು ಕಾಫಿ ಬೆಳೆಗಾರರಾದ ಬಿ.ಎಸ್. ಶಿವಶಂಕರ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಡಿ. ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಬಿ. ಸತೀಶ್, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿರುವ ಕೂಡಿಗೆಯ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಡಾ. ಸುರೇಶ್ ಹಾಗೂ ಮಡಿಕೇರಿ ಪಶು ಸಂಗೋಪನಾ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ಡಾ. ಎ.ಬಿ. ತಮ್ಮಯ್ಯರವರುಗಳು ಸ್ವಯಂ ಉದ್ಯೋಗ ಹಾಗೂ ಹೈನುಗಾರಿಕಗೆ ಬಗ್ಗೆ ಮಾಹಿತಿ ನೀಡಲಿದ್ದಾರೆ.