ಮಡಿಕೇರಿ, ಜ. 17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಜನ ಸಂಪರ್ಕ ಸಭೆಯು ತಾ. 19 ರಂದು ಬೆಳಗ್ಗೆ 10 ಗಂಟೆಯಿಂದ ಬೆಳಗ್ಗೆ 11.30 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಜನ ಸಂಪರ್ಕ ಸಭೆಯು ಮಧ್ಯಾಹ್ನ 12.30 ಗಂಟೆಯಿಂದ 2 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.