ಸೋಮವಾರಪೇಟೆ, ಜ. 17: ತಾಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಪದವಿಪೂರ್ವ ಕಾಲೇಜು ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜೀವನ ಚರಿತ್ರೆಯನ್ನು ಕುರಿತಾದ “ಪಾಪು-ಬಾಪು” ನಾಟಕದ ಪ್ರದರ್ಶನ ನಡೆಯಿತು. ಈ ಸಂದರ್ಭ ತಂಡದ ಸಂಯೋಜಕರಾದ ಸಜನ್ ಮಂದಣ್ಣ, ನಿಶಾಂತ್ ಮುತ್ತಣ್ಣ, ಕಾಲೇಜಿನ ಪ್ರಾಂಶುಪಾಲ ಶರಣ್, ಉಪನ್ಯಾಸಕರು, ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಮಿಲ್ಗ್ರೆಡ್ ಗೋನ್ಸಾಲ್‍ವೆಸ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.