ಮಡಿಕೇರಿ, ಜ. 18: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ ಜನ್ಮ ದಿನಾಚರಣೆ ಹಾಗೂ ತಾಳತ್ತಮನೆಯ ನೇತಾಜಿ ಯುವಕ ಮಂಡಲದ 27ನೇ ವಾರ್ಷಿಕೋತ್ಸವದ ಅಂಗವಾಗಿ ತಾ. 23 ರಂದು ಯುವಕ ಮಂಡಲದ ವತಿಯಿಂದ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಬಿ. ದಿವೇಶ್ ರೈ ತಿಳಿಸಿದ್ದಾರೆ.
ತಾ. 23 ರಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷರಿಗಾಗಿ ಮುಕ್ತ ವಾಲಿಬಾಲ್ ಪಂದ್ಯಾಟ, ಮಹಿಳೆಯರಿಗಾಗಿ ಜಿಲ್ಲಾಮಟ್ಟದ ಮುಕ್ತ ಥ್ರೋಬಾಲ್ ಪಂದ್ಯಾಟ, ಪುರುಷರು ಮತ್ತು ಮಹಿಳೆಯರಿಗಾಗಿ ಗುಡ್ಡಗಾಡು ಓಟದ ಸ್ಪರ್ಧೆ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಿನಿ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂದು ಸಂಜೆ ಸಮಾರೋಪ ಸಮಾರಂಭದ ನಂತರ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭ ಸಂತ್ರಸ್ತರನ್ನು ರಕ್ಷಿಸಿದ ಸ್ವಯಂಸೇವಕರನ್ನು ಸನ್ಮಾನಿಸಲಾಗುವದು ಎಂದು ಬಿ.ಬಿ. ದಿವೇಶ್ ರೈ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಬಿ.ಬಿ. ದಿವೇಶ್ ರೈ - 98448 61808, ಬಿ.ಬಿ. ಹರೀಶ್ ರೈ - 94821 03358 ಸಂಪರ್ಕಿಸಬಹುದಾಗಿದೆ.