ಮಡಿಕೇರಿ, ಜ. 18: ವೀರಾಜಪೇಟೆ ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ ತಾ. 19 ರಂದು (ಇಂದು) ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಅತಿಥಿಗಳಾಗಿ ಮಂಗಳೂರು ವಿವಿಯ ಮಾಜಿ ರಿಜಿಸ್ಟ್ರಾರ್ ಡಾ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ಮಾಡೆಲ್ ಹಾಗೂ ನಟಿ ಉಳ್ಳಿಯಡ ಶುಭ್ರ ಅಯ್ಯಪ್ಪ, ಗೋಣಿಕೊಪ್ಪಲು ಕಾವೇರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕುಟ್ಟಂಡ ಜಿ. ಉತ್ತಪ್ಪ ಪಾಲ್ಗೊಳ್ಳಲಿದ್ದಾರೆ.