ಕೂಡಿಗೆ, ಜ. 20: ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಬೆಟ್ಡದಲ್ಲಿರುವ ಉದ್ಯಾನವ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಈ ಕಾಮಗಾರಿಗೆ ಗ್ರಾ.ಪಂ ಸದಸ್ಯ ವೆಂಕಟೇಶ್ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿಯ ಹದಿನಾಲ್ಕನೇ ಹಣಕಾಸಿನ ಯೋಜನೆಯಡಿಯಲ್ಲಿ ಮುಂದುವರೆದ ಕಾಮಗಾರಿಗೆ ಒಂದು ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನಕ್ಕೆ ಬೇಲಿ ಹಾಕಲಾಗಿದೆ.
ಉದ್ಯಾನವನದಿಂದಾಗಿ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಪ್ರಗತಿಗೆ ಸಹಕಾರಿಯಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪ್ರವಾಸಿಗರಿಗೆ ವಿಶ್ರಾಂತಿ ಪಡೆಯಲು ಸಹಕಾರಿಯಾಗುತ್ತಲಿದೆ.
ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಶಿವನಂಜಪ್ಪ, ಮಂಜುಳಾ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಕೇಶ್ ಹಾಗೂ ಮತ್ತಿತರರು ಇದ್ದರು.