ಮಡಿಕೇರಿ, ಜ. 20: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಟೇಬಲ್ ಟೆನ್ನಿಸ್ ಕ್ರೀಡೆಯು ತಾ. 23 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
5ನೇ ತರಗತಿಯಿಂದ 7ನೇ ತರಗತಿಯವರೆಗೆ ಸಿಂಗಲ್ಸ್ ಮತ್ತು ಡಬಲ್ಸ್, 8ನೇ ತರಗತಿಯಿಂದ 12ನೇ ತರಗತಿಯವರೆಗೆ ಸಿಂಗಲ್ಸ್ ಮತ್ತು ಡಬಲ್ಸ್ (ವಯೋಮಿತಿಗೆ ಹುಟ್ಟಿದ ದಿನಾಂಕದ ಪ್ರತಿ ಅಥವಾ ಆಧಾರ್ ಕಾರ್ಡ್ ಸಲ್ಲಿಸಬೇಕು) ಹೆಚ್ಚಿನ ಮಾಹಿತಿಗೆ 08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಅವರು ತಿಳಿಸಿದ್ದಾರೆ.