ವೀರಾಜಪೇಟೆ, ಜ. 20: ವಿಕಲಚೇತನ, ಕೊಡಗಿನ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಬೆಂಗಳೂರಿನ ಅಂಗವಿಕಲ ಅಸೋಸಿಯೇಷನ್‍ನ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರವಣದೋಷ, ಮೂಗರು, ಕಿವುಡರು, ಅಂಗವಿಕಲರ ತರಬೇತಿ ಶಿಬಿರವನ್ನು ತಾಲೂಕು ತಹಶೀಲ್ದಾರ್ ಆರ್. ಗೋವಿಂದರಾಜು ಉದ್ಘಾಟಿಸಿದರು.

ಇದೇ ಸಭೆಯಲ್ಲಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಎಸ್.ಹೆಚ್. ಮೊೈನುದ್ದೀನ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಶಿರಸ್ತೆದಾರ್ ಚಿಣ್ಣಪ್ಪ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ.ಕೆ. ದೇಚಮ್ಮ, ಮುಖ್ಯಾಧಿಕಾರಿ ಶ್ರೀಧರ್, ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಬಿ. ಚೋಂದಮ್ಮ, ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ, ಇಲಾಖೆಯ ಅಧಿಕಾರಿ ದೇವರಾಜು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.