ಮಡಿಕೇರಿ, ಜ. 20: ಕೊಡಗು ಜಿಲ್ಲಾ ಮರಾಠ/ಮರಾಠಿ ಸಮಾಜ ಸೇವಾ ಸಂಘ ಹಾಗೂ ಕೊಡಗು ಜಿಲ್ಲಾ ಅಂಬಾಭವಾನಿ, ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಮಾಸಿಕ ಸಭೆ ತಾಳತ್ತ್‍ಮನೆಯ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.

ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೀರಾಜಪೇಟೆ ತಾಲೂಕಿನ ಮರಾಠಿ ಜಯ ಎಂಬವರಿಗೆ ಸಂಘದ ಸದಸ್ಯರಿಂದ ಸಂಗ್ರಹಿಸಿದ್ದ ಹಣವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭ ಅಧ್ಯಕ್ಷ ಪರಮೇಶ್ವರ ಮಾತನಾಡಿ, ತಾ.26 ರಂದು ಸಂಘದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುವದು. ಅಂದು ಜನಾಂಗ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್. ನಾಯ್ಕ್, ಅಂಬಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಎಸ್. ದಿವ್ಯಕುಮಾರ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್. ಯೋಗೇಂದ್ರ, ಪ್ರಮುಖರಾದ ಎಂ.ಟಿ. ದೇವಪ್ಪ, ಎಂ.ಟಿ. ಗುರುವಪ್ಪ, ಯುವಕ ಸಂಘದ ಕಾರ್ಯದರ್ಶಿ ಮೋಹನ್ ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.