ಕೂಡಿಗೆ, ಜ. 20: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೆರೆಯ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ಬಾರದ ಬಗ್ಗೆ ತೀವ್ರ ಚರ್ಚೆ ನಡೆಯಿತು. ನಂತರ ಕಳೆದ ಮಾಸಿಕ ಸಭೆಯಲ್ಲಿ ಕೈಗೊಂಡಂತೆ ಕಾಮ ಗಾರಿಗಳ ಕ್ರಿಯಾ ಯೋಜನೆಗಳನ್ನು ಅಂಗೀಕರಿಸಲಾಗಿ ರುವದರಿಂದ ಅವುಗಳನ್ನು ಆಯಾ ವಾರ್ಡ್‍ಗಳಲ್ಲಿ ಕಾಮಗಾರಿಗಳನ್ನು ಪೂರ್ಣ ಗೊಳಿಸುವ ಬಗ್ಗೆ ತೀರ್ಮಾನಿಸ ಲಾಯಿತು. ನೂತನವಾಗಿ ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ ಆಯಾ ವಾರ್ಡ್‍ಗಳ ಸದಸ್ಯರು ಗ್ರಾಮಸ್ಥರಿಗೆ ಸಮರ್ಪಕವಾಗಿ ಮಾಹಿತಿ ತಿಳಿಸಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ದಿಂದ ಸಿಗುವ ಸವಲತ್ತುಗಳನ್ನು ಒದಗಿಸಿಕೊಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಬೇಸಿಗೆ ಸಮೀಪಿಸುತ್ತಿದ್ದು, ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶುಚಿತ್ವದ ಬಗ್ಗೆ ಸುದೀರ್ಘವಾದ ಚರ್ಚೆ ನಡೆದವು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ಗ್ರಾಮ ಪಂಚಾಯಿತಿಯ ಪ್ರಮುಖ ಕಾರ್ಯವಾಗಿರುವ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಂತ್ರಸ್ತರಿಗೆ ಪರಿಹಾರ ಒದಗಿಸುವತ್ತ ಪ್ರಯತ್ನ ನಡೆಸಲಾಗುವದು ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಅವರು ಜಿಲ್ಲಾ ಪಂಚಾಯಿತಿಯ ಕಾಮಗಾರಿಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಕೆ.ಜಿ. ಮೋಹಿನಿ, ಕೆ.ವೈ. ರವಿ, ಈರಯ್ಯ, ಕೆ.ಬಿ. ರಾಮಚಂದ್ರ, ರತ್ನಮ್ಮ, ಹೆಚ್.ಎಸ್. ರವಿ, ಪುಷ್ಪ, ಜಯಶ್ರೀ, ಚಂದ್ರಿಕಾ, ಕಲ್ಪನಾ, ಟಿ.ಕೆ. ವಿಶ್ವನಾಥ್, ಕೆ.ಜೆ. ಮಂಜು, ಹಾಗೂ ಗ್ರಾಮ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಇದ್ದರು. ಕೆ.ಸಿ. ರವಿ ಸ್ವಾಗತಿಸಿ, ವಂದಿಸಿದರು.