ಸೋಮವಾರಪೇಟೆ, ಜ. 20: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು

ತಹಶೀಲ್ದಾರ್ ಪಿ.ಎಸ್. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಶಾಲಾ ವಿದ್ಯಾರ್ಥಿ ಗಳಿಗೆ ಸಾಂಸ್ಕøತಿಕ ಕಾರ್ಯಕ್ರಮ, ಪೊಲೀಸ್, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಪಥ ಸಂಚಲನ ನಡೆಸುವಂತೆ ತೀರ್ಮಾನಿಸಲಾಯಿತು. ಮಾಜಿ ಯೋಧರು ಹಾಗೂ ಸಮಾಜ ಸೇವಕರೊಬ್ಬರನ್ನು ಗುರುತಿಸಿ ಸಮಾರಂಭದಲ್ಲಿ ಸನ್ಮಾನಿಸುವಂತೆ ನಿರ್ಧರಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಇಲಾಖೆಗಳು ಸಹಕಾರ ನೀಡಬೇಕೆಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮನವಿ ಮಾಡಿದರು. ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದರು.