ಮಡಿಕೇರಿ ಜ. 20: ವೀರಾಜ ಪೇಟೆ ತಾಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಡಿಎಲ್‍ಆರ್ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ವೀರಾಜಪೇಟೆ ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿ ವತಿಯಿಂದ ತಾ. 23 ರಂದು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದೆಂದು ಸಮಿತಿಯ ಅಧ್ಯಕ್ಷ ಕೆ.ಎಂ. ಕುಶಾಲಪ್ಪ ತಿಳಿಸಿದ್ದಾರೆ.