ಮಡಿಕೇರಿ, ಜ. 20: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕøತಿಕ ಹಾಗೂ ಕ್ರೀಡಾಕೂಟ 2019 ಉದ್ಘಾಟನಾ ಸಮಾರಂಭವು ತಾ. 22 ರಂದು ಬೆಳಿಗ್ಗೆ 10 ಗಂಟೆಗೆ ಕೂಡಿಗೆ ಡಯಟ್ ಮತ್ತು ಕ್ರೀಡಾಶಾಲಾ ಮೈದಾನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ. ಅಪ್ಪಚು ್ಚರಂಜನ್, ಕೆ.ಜಿ. ಬೋಪಯ್ಯ, ಆಯನೂರು ಮಂಜುನಾಥ್, ಎಂಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ಸದಸ್ಯೆ ಕೆ.ಆರ್. ಮಂಜುಳ, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ, ಸೋಮವಾರ ಪೇಟೆ ತಾ.ಪಂ. ಸದಸ್ಯ ಡಿ.ಎಸ್. ಗಣೇಶ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ಮೈಸೂರು ಎಕ್ಸಲೆಂಟ್ ಸೋಲಾರ್ ಅಂಡ್ ಪ್ರಾಪರ್ಟಿಯ ಎಚ್.ಆರ್. ದಿನೇಶ್ ಇತರರು ಪಾಲ್ಗೊಳ್ಳಲಿದ್ದಾರೆ.

ಸಮಾರೋಪ: ತಾ. 23 ರಂದು ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ಬಿ. ರವಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಕೆ.ಎಸ್. ಪ್ರಸನ್ನಕುಮಾರ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಟಿ.ಎಸ್. ಗುರುರಾಜ್ ಇತರರು ಪಾಲ್ಗೊಳ್ಳಲಿದ್ದಾರೆ.